ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧ ಆಯ್ಕೆ: ಅಣವೀರ ಇಂಗಿಶೆಟ್ಟಿ ಅವರಿಂದ ಅಭಿನಂದನೆ
ವಿಜಯ ಟೈಮ್ಸ್ ನ್ಯೂಸ್ ಬೆಂಗಳೂರ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಮಾಜದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಪ್ರತಿಷ್ಠಿತ ಸ್ಥಾನಕ್ಕೆ, ಬೆಂಗಳೂರಿನಲ್ಲಿ ನಡೆದ ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಮಹತ್ವದ ಆಯ್ಕೆಯನ್ನು ವೀರಶೈವ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷರಾದ ಅಣವೀರ ಇಂಗಿಶೆಟ್ಟಿ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಮಾಜದ ಏಳಿಗೆಗೆ ಹೊಸ ಭರವಸೆ: ಈ ಸಂದರ್ಭದಲ್ಲಿ ಮಾತನಾಡಿದ ಅಣವೀರ ಇಂಗಿಶೆಟ್ಟಿ ಅವರು, "ಈಶ್ವರ ಖಂಡ್ರೆ ಅವರು ಕಳೆದ ೧೩ ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಅಪಾರ ಅನುಭವ ಹೊಂದಿದ್ದಾರೆ. ಅವರ ತಂದೆ, ಲೋಕನಾಯಕ ದಿವಂಗತ ಭೀಮಣ್ಣ ಖಂಡ್ರೆ ಅವರು ಮಹಾಸಭೆಯನ್ನು ಕಟ್ಟಿ ಬೆಳೆಸಿದ ಹಾದಿಯಲ್ಲೇ ಈಶ್ವರ ಖಂಡ್ರೆ ಅವರು ಸಮಾಜವನ್ನು ಮುನ್ನಡೆಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ಅವರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮಾಜದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ಚೈತನ್ಯ ಲಭಿಸಲಿದೆ," ಎಂದು ತಿಳಿಸಿದರು. ವೀರಶೈವ ಮತ್ತು ಲಿಂಗಾಯತ ಸಮಾಜದ ಒಗ್ಗೂಡಿಸುವುದಾಗಿ ಹೇಳಿ ಸಮಾಜಕ್ಕೆ ಬಲ ತುಂಬುವ ಕೆಲಸ ಮಾಡಿದ್ದಾರೆ, ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ನಿರ್ಮಾಣ ಮಾಡುವುದಾಗಿ ಹೇಳಿರುವುದು ಶ್ಲಾಘನೀಯವಾಗಿದೆ, ವೀರಶೈವ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿ ಪರವಾಗಿ ಅಣವೀರ ಇಂಗಿಶೆಟ್ಟಿ ಅವರು, ಸಚಿವರ ಈ ಅವಧಿಯಲ್ಲಿ ಸಮಾಜದ ಉದ್ಯಮಿಗಳಿಗೆ ಮತ್ತು ಯುವ ಪೀಳಿಗೆಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿ ಎಂದು ಆಶೀಸಿದ್ದಾರೆ.
Copyright © 2026 Vijay Times News. All Rights Reserved.
Website by Samanth