ಶ್ರೀಕ್ಷೇತ್ರ ಧರ್ಮಸ್ಥಳ ಸಂಘದ ಸಾಮಾಜಿಕ ಕಾರ್ಯ
ತಾಲೂಕ ಮಟ್ಟದ ಒಕ್ಕೂಟ ಸದಸ್ಯರ ಸಮಾವೇಶವನ್ನು
ವಿಜಯ ಟೈಮ್ಸ್ ನ್ಯೂಸ್ ಶಹಾಬಾದ್
ಧರ್ಮಸ್ಥಳ ಸಂಘ ಕೇವಲ ಸಾಲ ಕೊಡುವುದಷ್ಟೇ ಅಲ್ಲದೆ ನೂರಾರು ಜನೋಪಯೋಗಿ ಯೋಜನೆ ಕೈಗೆತ್ತಿಕೊಂಡಿದೆ. ದುಶ್ಚಟಮುಕ್ತ ಸಮಾಜ ನಿರ್ಮಿಸಲು ಜನಜಾಗೃತಿ ವೇದಿಕೆಯ ನಿರ್ಣಯಗಳನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಧಿಪತಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ರಾವೂರ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಚಿತ್ತಾಪುರ ತಾಲೂಕ ಮಟ್ಟದ ಒಕ್ಕೂಟ ಸದಸ್ಯರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಹಲವು ಜನಪರ ಯೋಜನಗಳ ಮೂಲಕ ಜನ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಅತ್ಯಂತ ಶ್ಲಾಘನೀಯವಾಗಿದ್ದು, ಸ್ವಾಸ್ಥ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ನಾಡಿನ ಕಲ್ಯಾಣದ ಆಶಯ ಹೊಂದಿರುವ ಸಂಸ್ಥೆಯು ಮಹಿಳಾ ಸಬಲೀಕರಣ, ವ್ಯಸನಮುಕ್ತ ಸಮಾಜ, ಆರೋಗ್ಯದ ಕಾಳಜಿ, ಪರಿಸರದ ಕಾಳಜಿ, ದೇವಸ್ಥಾನಗಳ ರಕ್ಷಣೆ, ಜೀರ್ಣೋದ್ದಾರಗಳ ಮೂಲಕ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದರೆ ಅದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆ. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಸಿದ್ದಲಿಂಗ ಬಾಳಿ ಮಾತನಾಡಿ ಸಮಾಜದ ಎಲ್ಲಾ ವರ್ಗದವರಿಗೆ ಯೋಜನೆಗಳನ್ನು ರೂಪಿಸಿದ್ದಾರೆ. ಜಾತಿ ಧರ್ಮದ ಭೇಧವಿಲ್ಲದೆ ಎಲ್ಲರೂ ಈ ಯೋಜನೆಗಳ ಲಾಭವನ್ನು ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಸಂಸ್ಥೆಯ ಒಕ್ಕೂಟ ಸದಸ್ಯರು ಪ್ರತಿಯೊoದು ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರ ಕನಸುಗಳನ್ನು ಸಾಕಾರಗೊಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.ಸಂಸ್ಥೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ ಅವರು ಕಳೆದ ಎಂಟು ವರ್ಷಗಳಲ್ಲಿ ಸಂಸ್ಥೆಯು ಈ ಭಾಗದಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಹಾಗೂ ತಲುಪಿರುವ ಗುರಿಯ ಕುರಿತು ಮಾಹಿತಿ ನೀಡಿದರು. ತಾಲೂಕ ಯೋಜನಾಧಿಕಾರಿ ಗುರುರಾಜ ಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ, ವಿಠ್ಠಲ್ ಕಟ್ಟಿಮನಿ, ಬ್ಯಾಂಕ್ ಅಧಿಕಾರಿ ಕಿರಣ್ ವೇದಿಕೆಯಲ್ಲಿದ್ದರು. ತಾಲೂಕಿನ ೬೦ ಒಕ್ಕೂಟದ ೫೦೦ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಮೇಲ್ವಿಚಾರಕ ಫಕೀರೇಶ್ ನಿರೂಪಿಸಿದರು, ವಲಯ ಮೇಲ್ವಿಚಾರಕಿ ಜಯಶ್ರೀ ವಂದಿಸಿದರು.
“ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ಫಲಾನುಭವಿಗಳ ಆರ್ಥಿಕ, ಸಾಮಾಜಿಕ, ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಸಾಮಾಜಿಕ ಸೇವೆಯನ್ನು ಮಾಡುತ್ತಿದೆ. ಸಮಾಜದಲ್ಲಿ ಎಲ್ಲರೂ ನೆಮ್ಮದಿಯ ಬದುಕನ್ನು ಬದುಕಲು ಉತ್ತಮ ಆರೋಗ್ಯ ನಿರ್ಮಾಣ ಮಾಡಲು ಅರಿವು ಕಾರ್ಯಕ್ರಮ ಹಲವಾರು ಸಮಾಜ ಪರ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ”.
- ಕಮಲಾಕ್ಷ, ಸಂಸ್ಥೆಯ ಜಿಲ್ಲಾ ನಿರ್ದೇಶಕ
Copyright © 2026 Vijay Times News. All Rights Reserved.
Website by Samanth