Breaking News


ಎನ್ ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ಕನಕ ಜಯಂತಿ  ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ  | ಜಿಲ್ಲೆ | Vijay Times News

ಎನ್ ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ಕನಕ ಜಯಂತಿ  ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ 

ಎನ್ ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ಕನಕ ಜಯಂತಿ 
ದಾಸ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ 

ವಿಜಯ ಟೈಮ್ಸ್ ನ್ಯೂಸ್ ಶಹಾಬಾದ್ 
ಜಾತಿ, ಮತ ಮತ್ತು ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ಹೇಳುತ್ತಾ, ಸಮಾಜ ಹಾಗೂ ದಾಸ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದವರು ಕನಕದಾಸರು ಎಂದು ಮುಖ್ಯಗುರು ಸಂಗೀತಾ ದೇವರಮನಿ ಹೇಳಿದರು. ಅವರು ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಕನಕದಾಸರು ನಾಡು ಕಂಡ ಅಪ್ರತಿಮ ದಾಸರಾಗಿದ್ದು ದಾಸ ಶ್ರೇಷ್ಠರಲ್ಲಿ ಶ್ರೇಷ್ಠರಾದವರು ಎಂದೆನಿಸಿಕೊAಡವರು. ಇಂತಹ ಕನಕದಾಸರು ಇಂದಿನ ವಿದ್ಯಮಾನಗಳನ್ನು ಐದು ಶತಮಾನಗಳ ಮುಂಚೆ ತಮ್ಮ ಕೃತಿಗಳಲ್ಲಿ ಪ್ರಸ್ತುತಪಡಿಸಿದ್ದು ಅವರ ಕಾಲಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಾದ ಪ್ರಕೃತಿ, ಶಾಂತವೀರ, ಕಾಯಕ, ಪವಿತ್ರಾ ಕನಕದಾಸರ ಬಗ್ಗೆ ಅನಿಸಿಕೆ ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಚವ್ಹಾಣ್, ಶಿಕ್ಷಕಿಯರಾದ ಸವಿತಾ ಬೆಳಗುಂಪಿ, ಸುಜಾತ ಕುಂಬಾರ, ಪಲ್ಲವಿ, ಪಾರ್ವತಿ ಚಟ್ಟಿ, ಆರತಿ ವೆಂಕಟೇಶ, ಅಂಬಿಕಾ ಶಿಕ್ಷಕರು ವಿದ್ಯಾರ್ಥಿಗಳು ಇತರರು ಪಾಲ್ಗೋಂಡಿದರು. 
 

Copyright © 2026 Vijay Times News. All Rights Reserved. Website by Samanth