ರಸ್ತೆ ಸುರಕ್ಷತಾ ಸಪ್ತಾಹ
ರಸ್ತೆ ಸುರಕ್ಷತೆಯ ಅರಿವು ಪ್ರತಿಯೊಬ್ಬರಿಗೂ ಅಗತ್ಯ
ವಿಜಯ ಟೈಮ್ಸ್ ನ್ಯೂಸ್ ಶಹಾಬಾದ್
ಪ್ರತಿಯೊಂದು ಜೀವವು ಅಮೂಲ್ಯವಾಗಿರುವುದರಿಂದ ರಸ್ತೆ ಸುರಕ್ಷತೆಯ ವ್ಯಾಪಕ ಅರಿವು, ಚಾಲನಾ ಜಾಗರೂಕತೆಯಿಂದ ವಾಹನ ಚಲಾಯಿಸುವ ಪ್ರತಿಯೊಬ್ಬರಿಗೂ ಅವಶ್ಯವಾಗಿದೆ ಎಂದು ಶಹಾಬಾದ ವಲಯ ಡಿವಾಯ್‌ಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.
ಅವರು ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ದೈನಂದಿನ ಜೀವನದಲ್ಲಿ ಕೆಲವರನ್ನು ಹೊರತುಪಡಿಸಿ ಉಳಿದವರೆಲ್ಲರು ವಾಹನ ಚಾಲನೆಯಲ್ಲಿ ತೊಡಗಿರುವುದು ಇತ್ತೀಚಿಗೆ ಸರ್ವೇಸಾಮಾನ್ಯವಾಗಿದೆ. ವಾಹನಗಳು ಸಾಕಷ್ಟು ಸಂಖ್ಯೆಯಲ್ಲಿ ರಸ್ತೆಗಿಳಿಯುತ್ತಿರುವುದರಿಂದ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಅಪಘಾತಗಳನ್ನು ವ್ಯಾಪಕವಾಗಿ ತಡೆಯುವ ನಿಟ್ಟಿನಲ್ಲಿ ಪ್ರತಿವರ್ಷ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು ಜನಸಾಮಾನ್ಯರಿಗೆ, ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಮುಖ್ಯವಾಗಿ ರಸ್ತೆ ಸುರಕ್ಷತೆಯ ಅರಿವು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಅಗತ್ಯವಾಗಿದೆ ಎಂದು ಹೇಳಿದರು.
ನಗರಠಾಣೆಯ ಪಿಐ ನಟರಾಜ್ ಲಾಡೆ ಅವರು ಮಾತನಾಡಿ, ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಿಂದ ೧ ಲಕ್ಷದ ೮೪ ಸಾವಿರಕ್ಕೂ ಅಧಿಕ ಮಂದಿ ಮರಣ ಹೊಂದುತ್ತಿದ್ದಾರೆ. ವಾಹನ ಚಾಲನಾ ಸಮಯದಲ್ಲಿ ಅಜಾಗರೂಕತೆಯಿಂದ ಹೆಲ್ಮೆಟ್, ಸೀಟ್‌ಬೆಲ್ಟ್ ಹಾಕದಿರುವುದು, ಗಮನ ಬೇರೆಡೆ ಇರುವುದು ಹಾಗೂ ಮೋಬೈಲ್ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಎಚ್ಚರಿಕೆಯಿಂದ ರಸ್ತೆ ಸುರಕ್ಷತಾ ಸಂಚಾರಿ ನಿಯಮಗಳನ್ನು ಕಡ್ಡಾವಾಗಿ ಪಾಲಿಸಬೇಕು ಎಂದು ಹೇಳಿದರು.
ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಡಿವಾಯ್‌ಎಸ್ಪಿ ಶಂಕರಗೌಡ ಪಾಟೀಲ್ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ನಗರಠಾಣೆಯ ಪಿಐ ನಟರಾಜ್ ಲಾಡೆ, ಪಿಎಸ್‌ಐ ಚಂದ್ರಕಾAತ ಮಕಾಲೆ, ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಲೋವಿಟ್, ಸಿಸ್ಟರ್ ಕ್ಯಾಂಡಿಡ, ಸಿಸ್ಟರ್ ಗ್ರೇಸ್ ಲೀಮಾ, ಸಿಸ್ಟರ್ ರಿಷಿಕಾ, ಮುಕ್ತಿ, ಮುಖ್ಯಗುರು ಸಾಹೇಬ್‌ಗೌಡ ಪಾಟೀಲ್, ಶಿಕ್ಷಕರು ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದರು.
Copyright © 2025 Vijay Times News. All Rights Reserved.
Website by Samanth